ಲಿಖಿತ ಪರೀಕ್ಷೆ ಇಲ್ಲದೇ ಕೆಲಸ, 50 ಸಾವಿರ ಸಂಬಳ! ಸರ್ಕಾರಿ ಉದ್ಯೋಗಕ್ಕಾಗಿ ಹುಡುಕ್ತಿರೋರು ಅರ್ಜಿ ಹಾಕಿ.
Sanjeevini Recruitment 2026: ಉದ್ಯೋಗ ಹುಡುಕುತ್ತಿರುವ ಯುವಕರಿಗೆ ಕರ್ನಾಟಕ ಸರ್ಕಾರದ ಗ್ರಾಮೀಣಾಭಿವೃದ್ಧಿ ವಲಯದಿಂದ ಉತ್ತಮ ಸುದ್ದಿ ಬಂದಿದೆ. ಗ್ರಾಮೀಣ ಮಹಿಳೆಯರ ಸಬಲೀಕರಣ ಮತ್ತು ಜೀವನೋಪಾಯ ಉತ್ತೇಜನಕ್ಕಾಗಿ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಉತ್ತೇಜನ ಸಂಸ್ಥೆಯಾದ ಸಂಜೀವಿನಿ ವತಿಯಿಂದ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆ ಕುರಿತ ವರದಿ ಇಲ್ಲಿದೆ:
Sanjeevini Recruitment 2026: ಉದ್ಯೋಗ ಹುಡುಕುತ್ತಿರುವ ಯುವಕರಿಗೆ ಕರ್ನಾಟಕ ಸರ್ಕಾರದ (Government of Karnataka) ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಉತ್ತಮ ಸುದ್ದಿ ಬಂದಿದೆ. ಗ್ರಾಮೀಣ ಮಹಿಳೆಯರ ಸಬಲೀಕರಣ ಮತ್ತು ಜೀವನೋಪಾಯ ಉತ್ತೇಜನಕ್ಕಾಗಿ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಉತ್ತೇಜನ ಸಂಸ್ಥೆಯಾದ (Karnataka State Rural Livelihood Promotion Agency) ಸಂಜೀವಿನಿ (Sanjeevini) ವತಿಯಿಂದ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿಯ ಪ್ರಮುಖ ಆಕರ್ಷಣೆ ಎಂದರೆ ಹೆಚ್ಚಿನ ಹುದ್ದೆಗಳಿಗೆ ಲಿಖಿತ ಪರೀಕ್ಷೆ ಇಲ್ಲದೆ ಕೆಲಸ (Job without a written test) ಹೌದು, ಮೆರಿಟ್ ಆಧಾರದ ಮೇಲೆ ಆಯ್ಕೆ ನಡೆಯಲಿದ್ದು, ಆ ಕುರಿತ ವಿವರ ಇಲ್ಲಿದೆ:

ಹುದ್ದೆಗಳ ವಿವರ:-
ಅಧಿಕೃತ ಪ್ರಕಟಣೆಯ ಪ್ರಕಾರ ಒಟ್ಟು 23 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಇದರಲ್ಲಿ ಕ್ಲಸ್ಟರ್ ಮೇಲ್ವಿಚಾರಕ (Cluster Supervisor) ಹುದ್ದೆಗಳು ಅತಿ ಹೆಚ್ಚು ಅಂದರೆ 13 ಸ್ಥಾನಗಳಿದ್ದು, ಕಚೇರಿ ಸಹಾಯಕ (Office Assistant) 05 ಹುದ್ದೆಗಳಿವೆ. ಇನ್ನುಳಿದಂತೆ ಬ್ಲಾಕ್ ಮ್ಯಾನೇಜರ್ (Block Manager) 03 ಮತ್ತು ಜಿಲ್ಲಾ ವ್ಯವಸ್ಥಾಪಕರು (District Manager) 02 ಹುದ್ದೆಗಳ ನೇಮಕಾತಿ ನಡೆಯುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳನ್ನು ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ನಿಯೋಜಿಸಲಾಗುವುದು.
ಅರ್ಹತೆ:-
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನಿಗದಿತ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
ಶೈಕ್ಷಣಿಕ ಅರ್ಹತೆ ಹೊಂದಿರಬೇಕು. ಕ್ಲಸ್ಟರ್ ಮೇಲ್ವಿಚಾರಕ ಹುದ್ದೆಗೆ ಯಾವುದೇ ಪದವಿ ಸಾಕು, ಗ್ರಾಮೀಣಾಭಿವೃದ್ಧಿ ಯೋಜನೆಗಳಲ್ಲಿ ಅನುಭವವಿದ್ದರೆ ಆದ್ಯತೆ. ಕಚೇರಿ ಸಹಾಯಕರಿಗೆ ಪದವಿ ಜೊತೆಗೆ ಕಂಪ್ಯೂಟರ್ ನಿರ್ವಹಣೆ ಮತ್ತು ಟೈಪಿಂಗ್ ಕೌಶಲ್ಯ ಅಗತ್ಯ. ಮ್ಯಾನೇಜರ್ ಹುದ್ದೆಗಳಿಗೆ ಸ್ನಾತಕೋತ್ತರ ಪದವಿ ಅಥವಾ ಎಂಬಿಎ ಕಡ್ಡಾಯ. ಎಲ್ಲಾ ಅಭ್ಯರ್ಥಿಗಳಿಗೆ ಕನ್ನಡ ಭಾಷೆಯಲ್ಲಿ ಓದುವ, ಬರೆಯುವ ಮತ್ತು ಮಾತನಾಡುವ ಜ್ಞಾನ ಕಡ್ಡಾಯ .
ವಯೋಮಿತಿ:-
ಅರ್ಜಿದಾರರಿಗೆ ಕನಿಷ್ಠ 18 ವರ್ಷ ವಯಸ್ಸು ಕಡ್ಡಾಯವಾಗಿದೆ. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 45 ವರ್ಷಗಳಾಗಿದೆ. ಸರ್ಕಾರದ ನಿಯಮದಂತೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ. ಹಿಂದುಳಿದ ವರ್ಗಗಳಾದ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 3 ವರ್ಷಗಳ ಸಡಿಲಿಕೆ ಅನ್ವಯವಾಗುತ್ತದೆ.
ಹುದ್ದೆಗಳ ಸ್ವರೂಪ:-
ಕ್ಲಸ್ಟರ್ ಮೇಲ್ವಿಚಾರಕ ಹುದ್ದೆಯವರು ಗ್ರಾಮೀಣ ಮಟ್ಟದಲ್ಲಿ ಸ್ವಸಹಾಯ ಗುಂಪುಗಳ ಚಟುವಟಿಕೆಗಳನ್ನು ಮೇಲ್ವಿಚಾರಣೆ ಮಾಡಬೇಕು. ಕಚೇರಿ ಸಹಾಯಕರು ಕಚೇರಿ ಕಾರ್ಯ, ದಾಖಲೆ ನಿರ್ವಹಣೆ ಮತ್ತು ಕಂಪ್ಯೂಟರ್ ಆಧಾರಿತ ಕೆಲಸಗಳನ್ನು ನಿರ್ವಹಿಸಬೇಕು. ಬ್ಲಾಕ್ ಮತ್ತು ಜಿಲ್ಲಾ ಮ್ಯಾನೇಜರ್ ಹುದ್ದೆಯವರು ಯೋಜನೆಗಳ ಅನುಷ್ಠಾನ, ಮೇಲ್ವಿಚಾರಣೆ ಮತ್ತು ವರದಿ ತಯಾರಿಸುವ ಜವಾಬ್ದಾರಿ ಹೊಂದಿರುತ್ತಾರೆ.ಗಿದೆ.
ಉದ್ಯೋಗದ ಸ್ಥಳ:-
ಆಯ್ಕೆಯಾದ ಅಭ್ಯರ್ಥಿಗಳನ್ನು ಕರ್ನಾಟಕದ ವಿವಿಧ ಜಿಲ್ಲೆಗಳು ಮತ್ತು ತಾಲೂಕುಗಳಲ್ಲಿ ನಿಯೋಜಿಸಲಾಗುತ್ತದೆ.
ವೇತನ:-
ಕ್ಲಸ್ಟರ್ ಮೇಲ್ವಿಚಾರಕರಿಗೆ ತಿಂಗಳಿಗೆ 15 ಸಾವಿರದಿಂದ 25 ಸಾವಿರ ರೂಪಾಯಿ ವರೆಗೆ ಗೌರವಧನ ನೀಡಲಾಗುತ್ತದೆ. ಕಚೇರಿ ಸಹಾಯಕರಿಗೆ 12 ಸಾವಿರದಿಂದ 18 ಸಾವಿರ ರೂಪಾಯಿ ವರೆಗೆ ಸಂಬಳ ಸಿಗುತ್ತದೆ. ಮ್ಯಾನೇಜರ್ ಹುದ್ದೆಗಳಿಗೆ ತಿಂಗಳಿಗೆ 30 ಸಾವಿರದಿಂದ 50 ಸಾವಿರ ರೂಪಾಯಿ ವರೆಗೆ ಸಂಬಳ ಮತ್ತು ಇತರೆ ಭತ್ಯೆಗಳು ದೊರೆಯುತ್ತವೆ.
ಅರ್ಜಿ ಶುಲ್ಕ ಮತ್ತು ಪಾವತಿ ವಿಧಾನ:-
ಸಾಮಾನ್ಯ ಮತ್ತು ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಾಗಿ 500 ರೂಪಾಯಿ ನಿಗದಿಯಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ 1 ಅಭ್ಯರ್ಥಿಗಳಿಗೆ 250 ರೂಪಾಯಿ ಶುಲ್ಕ ಮಾತ್ರ. ಶುಲ್ಕವನ್ನು ಆನ್‌ಲೈನ್ ಮೂಲಕವೇ ಪಾವತಿಸಬೇಕು.

ಆಯ್ಕೆ ಪ್ರಕ್ರಿಯೆ:-
ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಮುಖ್ಯವಾಗಿ ದಾಖಲೆ ಪರಿಶೀಲನೆ ಮತ್ತು ಶೈಕ್ಷಣಿಕ ಅಂಕಗಳ ಆಧಾರದ ಮೆರಿಟ್ ಲಿಸ್ಟ್ ಮೂಲಕ ನಡೆಯುತ್ತದೆ. ಅಗತ್ಯವಿದ್ದಲ್ಲಿ ಲಿಖಿತ ಪರೀಕ್ಷೆ ನಡೆಸಬಹುದು. ನಂತರ ವೈಯಕ್ತಿಕ ಸಂದರ್ಶನದ ಮೂಲಕ ಅಂತಿಮ ಆಯ್ಕೆ ಮಾಡಲಾಗುತ್ತದೆ.
ಒಪ್ಪಂದ ಅವಧಿ ಮತ್ತು ಸಾಮಾನ್ಯ ಷರತ್ತು:-
ಈ ಹುದ್ದೆಗಳು ಗುತ್ತಿಗೆ ಆಧಾರಿತವಾಗಿದ್ದು ಯೋಜನೆಯ ಅವಧಿಯವರೆಗೆ ಮಾತ್ರ ಮಾನ್ಯವಾಗಿರುತ್ತವೆ. ತಪ್ಪು ಮಾಹಿತಿ ನೀಡಿದ ಅಭ್ಯರ್ಥಿಗಳ ಅರ್ಜಿ ಯಾವುದೇ ಹಂತದಲ್ಲೂ ರದ್ದುಪಡಿಸಬಹುದು. ನೇಮಕಾತಿಗೆ ಸಂಬಂಧಿಸಿದಂತೆ ಅಂತಿಮ ತೀರ್ಮಾನವನ್ನು ಸಂಸ್ಥೆಯೇ ಕೈಗೊಳ್ಳುತ್ತದೆ.
ಅರ್ಜಿ ಸಲ್ಲಿಸುವ ವಿಧಾನ:-
ಅಭ್ಯರ್ಥಿಗಳು ಸಂಜೀವಿನಿಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ನೋಂದಣಿ ಮಾಡಿಕೊಂಡು, ಶೈಕ್ಷಣಿಕ ವಿವರಗಳನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಿ, ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಬೇಕು. ಭವಿಷ್ಯದ ಬಳಕೆಗೆ ಅರ್ಜಿಯ ಪ್ರಿಂಟ್ ತೆಗೆದುಕೊಳ್ಳುವುದು ಉತ್ತಮ.
ಅರ್ಜಿ ಸಲ್ಲಿಸುವಾಗ ಪದವಿ ಅಂಕಪಟ್ಟಿಗಳು ಮತ್ತು ಫೋಟೋವನ್ನು ಸರಿಯಾದ ಗಾತ್ರದಲ್ಲಿ ಸಿದ್ಧಪಡಿಸಿಕೊಳ್ಳಿ. ಸರ್ವರ್ ಬ್ಯುಸಿ ಆಗುವ ಸಾಧ್ಯತೆ ಇರುವುದರಿಂದ ರಾತ್ರಿ 9 ಗಂಟೆ ನಂತರ ಅಥವಾ ಬೆಳಗಿನ ಜಾವ ಅರ್ಜಿ ಸಲ್ಲಿಸಿ. ಸಂದರ್ಶನಕ್ಕೆ ಮೂಲ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಿ.
| Total jobs | 23 |
| education | degree |
| Location | karnataka |